Mysore
17
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಹೈಕಮಾಂಡ್‌ಗೆ ಕಪ್ಪ ಸಲ್ಲಿಸಲು ರಾಜ್ಯ ಸರ್ಕಾರ ಲೂಟಿಗೆ ಇಳಿದಿದೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ 

ಮೈಸೂರು: ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ವಸತಿ ಹಂಚಿಕೆಯಲ್ಲಿ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ. 60% ಸರ್ಕಾರದಲ್ಲಿ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಬಡವರ ಮನೆ ಹಂಚಿಕೆಯಲ್ಲೂ ಹಣ ವಸೂಲಿ ಮಾಡುತ್ತಿದ್ದಾರೆ. 36% ಹಣವನ್ನು ವಸತಿ ಇಲಾಖೆಯಲ್ಲೂ ಕೇಳುತ್ತಿದ್ದಾರೆ. ಅಬಕಾರಿ ಇಲಾಖೆಯಲ್ಲೂ ಲೂಟಿ ಮಾಡಿದ್ದಾರೆ. ವಾಲ್ಮೀಕಿ ಹಗರಣ, ಮುಡಾ ಹಗರಣದಲ್ಲೂ ಲೂಟಿ ಆಯಿತು.

ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ. ಹೈಕಮಾಂಡ್‌ಗೆ ಕಪ್ಪಕಾಣಿಕೆ ನೀಡಲು ನಾ ಮುಂದು ತಾ ಮುಂದು ಎಂದು ನಿಂತಿದ್ದಾರೆ. ಹೈಕಮಾಂಡ್‌ಗೆ ಯಾರು ಜಾಸ್ತಿ ಕಪ್ಪಕಾಣಿಕೆ ನೀಡುತ್ತಾರೋ ಅವರಿಗೆ ಬೆಲೆ ಜಾಸ್ತಿ ಆದಂತಾಗಿದೆ. ಬಿಹಾರ್ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಗಾಗಿ ಕರ್ನಾಟಕದಿಂದ ಲೂಟಿ ಮಾಡಲಾಗುತ್ತಿದೆ. ಲೂಟಿ ಹೊಡೆದು ಸಚಿವ ಸ್ಥಾನದಿಂದ ಸಚಿವರು ಮುಂದುವರಿಯುತ್ತಿದ್ದಾರೆ. ನಾಳೆಯಿಂದ ಹೋರಾಟದ ರೂಪುರೇಷೆ ಸಿದ್ದವಾಗುತ್ತಿದೆ. ರಾಜ್ಯಾದ್ಯಂತ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇವೆ. ಮುಖ್ಯಮಂತ್ರಿಗಳಿಗೆ ಗೌರವವಿದ್ದರೆ ಇಷ್ಟೊತ್ತಿಗೆ ಸಚಿವರ ರಾಜೀನಾಮೆ ಪಡೆಯಬೇಕಿತ್ತು ಎಂದು ಕಿಡಿಕಾರಿದರು.

Tags:
error: Content is protected !!