Mysore
31
scattered clouds

Social Media

ಬುಧವಾರ, 20 ಮೇ 2026
Light
Dark

ಪ್ರಾಥಮಿಕ, ಪ್ರೌಢ ಶಾಲಾ ಮಕ್ಕಳಿಗೆ ಮುಖಚರ್ಯೆ ಆಧಾರಿತ ಇ-ಹಾಜರಾತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.

‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ ತೆಗೆದುಕೊಳ್ಳಲಾಗುತ್ತದೆ.

ಸುಮಾರು 5 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಕರ್ನಾಟಕ ಸ್ಟೇಟ್ ಡೇಟಾ ಸೆಂಟರ್ ಮೂಲಕ ನಿರ್ವಹಣೆ ಮಾಡಲಾಗುತ್ತದೆ. ಇದಕ್ಕಾಗಿ ಸಾಫ್ಟ್‌ವೇರ್‌ ಕೂಡ ಸಿದ್ಧಪಡಿಸಲಾಗುತ್ತಿದೆ. ಇದು ಗರಿಷ್ಠ ಗೌಪ್ಯತೆ ಮತ್ತು ಸುರಕ್ಷತೆ ಕಾಪಾಡುತ್ತದೆ. ಪ್ರಸಕ್ತ ವರ್ಷದಿಂದಲೇ ಇ-ಹಾಜರಾತಿ ಜಾರಿಗೆ ಬರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೂ, ನಕಲಿ ದಾಖಲಾತಿ ತೋರಿಸಿ ಸರ್ಕಾರದ ವಿವಿಧ ಸೌಲಭ್ಯ ಪಡೆಯುತ್ತಿರುವ ಶಾಲೆಗಳ ಕಳ್ಳಾಟಕ್ಕೆ ತಡೆ ಹಾಕಲು ಮುಂದಾಗಿರುವ ಶಿಕ್ಷಣ ಇಲಾಖೆ, ಇ–ಹಾಜರಾತಿ ಕಡ್ಡಾಯದತ್ತ ಹೆಜ್ಜೆ ಇಟ್ಟಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಇ–ಹಾಜರಾತಿ ಕಡ್ಡಾಯಗೊಳಿಸುವ ಆದೇಶವನ್ನೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Tags:
error: Content is protected !!