Mysore
13
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ಅಧಿಕಾರ ಸ್ವೀಕಾರ

ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು.

ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.

ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ಮಾಜಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಅವರು ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ನೂತನ ಅಧ್ಯಕ್ಷರಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶುಭ ಕೋರಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಂಬ್ರಳ್ಳಿ ಸುಬ್ಬಣ್ಣ ಅವರು, ನಾನು ಇಂದು ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಜಿಲ್ಲೆಯ ಜವಾಬ್ದಾರಿ ನನ್ನ ಮೇಲಿದೆ. ತಳ ಮಟ್ಟದಲ್ಲಿ ಪಕ್ಷವನ್ನು ಕಟ್ಟಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲು ಶ್ರಮ ವಹಿಸುತ್ತೇನೆ ಎಂದರು.

ಇನ್ನು ಮುಂದಿನ ಚುನಾವಣೆಗೆಂದೇ ಮಂಡಲ ಸಮಿತಿಯ ಜೊತೆ ಚರ್ಚಿಸಿ, ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲು ಶ್ರಮ ವಹಿಸಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ನಡೆಯುವ ಎಲ್ಲಾ ಬೆಳವಣಿಗೆಗೆಳು ಇಲ್ಲಿ ಲಭ್ಯ.. ಮನೆಯಲ್ಲೇ ಕುಳಿತು ಸಾಂಸ್ಕೃತಿಕ ನಗರ ಮಾಹಿತಿ ಪಡೆಯಿರಿ

Tags:
error: Content is protected !!