Mysore
26
light rain

Social Media

ಶನಿವಾರ, 13 ಜೂನ್ 2026
Light
Dark

4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿಯುವ ಗುರಿ : ಶಾಸಕ ಗಣಿಕ ರವಿಕುಮಾರ್

Target to crush 4.5 lakh metric tons of sugarcane MLA Ganiga Ravikumar

ಮಂಡ್ಯ : ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಗಣಿಗ ರವಿಕುಮಾರ್ ತಿಳಿಸಿದರು.

ಅವರು ಇಂದು ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಪೂಜೆ ಸಲ್ಲಿಸಿ ಬಾಯ್ಲರ್‌ಗೆ ಅಗ್ನಿ ಸ್ಪರ್ಶ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೈಶುಗರ್ ಸಕ್ಕರೆ ಕಾರ್ಖಾನೆಗೆ ಮೂಲ ಬಂಡವಾಳಕ್ಕೆ 28 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಮೈಶುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು ಸಲ್ಲಿಸಿದ್ದಾರೆ. ಸರ್ಕಾರ ಸಕಾರತ್ಪಕವಾಗಿ ಸ್ಪಂದಿಸಲಿದೆ ಎಂದರು.

ಮೈಶುಗರ್ ಸಕ್ಕರೆ ಕಾರ್ಖಾನೆ ರೈತರ ಏಳಿಗೆಗಾಗಿ ನಡೆಸುತ್ತಿರುವ ಕಾರ್ಖಾನೆಯಾಗಿದ್ದು, ಕಾರ್ಖಾನೆಯನ್ನು ಲಾಭ-ನಷ್ಠ ಲೆಕ್ಕ ಮಾಡಿಕೊಂಡು ನಡೆಸಲು ಸಾಧ್ಯವಿಲ್ಲ. ನಿಧನಗತಿಯಲ್ಲಿ ಮೈಶುಗರ್ ಸಕ್ಕರೆ ಕಾರ್ಖಾನೆ ಸಹ ಲಾಭ ಗಳಿಸಲಿದೆ. ಸಮಯಾವಕಾಶ ಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ಮೈಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾಧಿಕಾರಿ ಡಾ: ಕುಮಾರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನು ಓದಿದ್ರಾ..?:- ಅರ್ಜುನ ಆನೆ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ 

Tags:
error: Content is protected !!