ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರವಾಗಿ ಮುಂದಿನ ಒಂದು ತಿಂಗಳಿನಲ್ಲಿ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರಸ್ತಾಪವನ್ನು ಸಚಿವ ಸಂಪುಟ ಸಭೆಗೆ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಒದಗಿಸುವ ಅಂಶಗಳ ಕುರಿತಾಗಿ ಎಲ್ಲೆಡೆ ಅಭಿಪ್ರಾಯ ಸಂಗ್ರಹಿಸಿದ ನಂತರ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸುತ್ತೇವೆ. ಆ ಬಳಿಕವೇ ಸಂಪುಟ ಸಭೆಗೆ ಪ್ರಸ್ತಾವನೆ ಮಂಡಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿದಿನ ಎರಡರಿಂದ ಮೂರು ಗಂಟೆ ಸಂಚಾರ ದಟ್ಟಣೆಯಲ್ಲೇ ಕಾಲ ಕಳೆಯುವ ಉದ್ಯೋಗಿಗಳು ಮತ್ತೆ 10 ಗಂಟೆ ದುಡಿಯುವುದು ಮೇಲ್ನೋಟಕ್ಕೆ ನನಗೆ ಸರಿ ಎನಿಸುವುದಿಲ್ಲ. ಆದರೆ, ಎಲ್ಲರ ಅಭಿಪ್ರಾಯ ಸಂಗ್ರಹಿಸಿದ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಆಂದೋಲನ ಪತ್ರಿಕೆಯಲ್ಲಿ ಪ್ರಕಟವಾಗುವ ಲೇಖನಗಳನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ..





