Mysore
17
clear sky

Social Media

ಗುರುವಾರ, 22 ಜನವರಿ 2026
Light
Dark

ಮೊದಲ ಆಷಾಢ ಶುಕ್ರವಾರದ ಸಂಭ್ರಮ : ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕರ ಸಾಗರ

ಮೈಸೂರು : ನಗರದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಅಪರಾ ಸಂಖ್ಯೆಯಲ್ಲಿ ಸಾರ್ವಜನಿಕರು ಹರಿದು ಬರುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟ ಹೂ-ತಳಿರು ತೋರಣ, ದೀಪಾಲಂಕಾರದಿಂದ ಸಾರ್ವಜನಿಕರನ್ನು ಸ್ವಾಗತಿಸುತ್ತಿದೆ.

ಆಷಾಢ ಶುಕ್ರವಾರ ನಾಡ ದೇವತೆ ಚಾಮುಂಡೇಶ್ವರಿಗೆ ಮುಂಜಾನೆ ಪಂಚಾಮೃತ ಅಭಿಷೇಕ, ಅರ್ಚನೆ ಮಾಡಲಾಯಿತು. ಹೂವಿನ ನಡುವೆ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ಸಾರ್ವಜನಿಕರಿಗೆ ದರ್ಶನ ನೀಡಿದರು. ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನಲೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಪ್ರತಿವರ್ಷದಂತೆ ಈ ಬಾರಿಯೂ ಖಾಸಗಿ ವಾಹನಗಳ ಪ್ರವೇಶ ನಿರ್ಭಂಧಿಸಲಾಗಿದ್ದು ಕೆ.ಎಸ್.ಆರ್.ಟಿ.ಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

ನಾಡದೇವಿಯ ದರುಶನ ಪಡೆಯಲು ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ 300ರೂ ,2 ಸಾವಿರ ಟಿಕೇಟ್ ವ್ಯವಸ್ಥೆ ಮಾಡಲಾಗಿದೆ. 2000 ಟಿಕೇಟ್ ಪಡೆದವರಿಗೆ ಲಲಿತ ಮಹಲ್ ಯಿಂದ ಬೆಟ್ಟಕ್ಕೆ ಎಸಿ ಬಸ್ ನಲ್ಲಿ ಕರೆದುಕೊಂಡು ಹೋಗಿ ಬೆಟ್ಟದಲ್ಲಿ ನೇರವಾಗಿ ದರ್ಶನ ಮಾಡಿ ನಂತರ ಪ್ರಸಾದ ರೂಪದಲ್ಲಿ ಚಾಮುಂಡೇಶ್ವರಿ ವಿಗ್ರಹ, ಲಾಡು, ಕುಡಿಯುವ ನೀರಿನ ಬಾಟಲ್, ಒಂದು ಬ್ಯಾಗ್ ವಿತರಣೆ ಮಾಡಲಾಗುತ್ತಿದೆ.

Tags:
error: Content is protected !!