Mysore
23
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ನಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

Nandi Hills Closed to Tourists Again for 4 More Days

ಚಿಕ್ಕಬಳ್ಳಾಪುರ: ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಜೂನ್.‌30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ.3ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ಜೂನ್.‌30ರಿಂದ ಜುಲೈ.3ರವರೆಗೆ ನಂದಿ ಬೆಟ್ಟದ ವಸತಿ ಕೊಠಡಿಗಳನ್ನು ಮುಂಗಡ ಕಾಯ್ದಿರಿಸುವಿಕೆಯನ್ನು ಸಹ ನಿಷೇಧಿಸಲಾಗಿದೆ.

ನಂದಿಬೆಟ್ಟದಲ್ಲಿ ಜುಲೈ.2ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Tags:
error: Content is protected !!