ಮದ್ದೂರು: ಇಲ್ಲಿನ ಭಾರತಿ ನಗರದಲ್ಲಿ ಏರ್ಪಡಿಸಿರುವ ಜೆಡಿಎಸ್ ಸದಸ್ಯತ್ವ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲು ಆಗಮಿಸಿದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೃಹತ್ ಅನಾನಸ್ ಹಾರ ಹಾಕಿ ಸ್ವಾಗತ ಕೋರಲಾಯಿತು.
ಮಾಜಿ ಶಾಸಕ ಡಿಸಿ ತಮ್ಮಣ್ಣ, ಮಾಜಿ ಶಾಸಕ ಅನ್ನದಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ ರಮೇಶ್, ಕಾರ್ಯಾಧ್ಯಕ್ಷ ರಾಜಣ್ಣ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.
ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಇಂದಿನಿಂದ ಮಂಡ್ಯ ಜಿಲ್ಲೆ, ಮದ್ದೂರಿನ ಭಾರತಿನಗರದಲ್ಲಿ ಜೆಡಿಎಸ್ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಸಮಾವೇಶಕ್ಕೆ ಕಾರ್ಯಕರ್ತರು, ಜೆಡಿಎಸ್ ಪಕ್ಷದ ಹಿರಿಯ ಹಾಗೂ ಕಿರಿಯ ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ನಂತರ ಮಳವಳ್ಳಿ ರಸ್ತೆಯಲ್ಲಿರುವ ಪ್ರಸಿದ್ಧ ಹೋಟೆಲ್ ರವಿ ಪಿಂಟು ಅವರು ನಿಖಿಲ್ ಕುಮಾರಸ್ವಾಮಿಗೆ ಚಹಾ ನೀಡಿ ತಮ್ಮ ಅಭಿಮಾನ ವ್ಯಕ್ತಪಡಿಸಿದರು.
ತೋಪ್ಪನಹಳ್ಳಿ ಕೆಂಗಲ್ ಗೌಡ ಅವರು ನಿಖಿಲ್ ಕುಮಾರಸ್ವಾಮಿಗೆ ತಿರುಪತಿ ಲಾಡು ಪ್ರಸಾದ ನೀಡಿ ಮುಂದಿನ ನಿಮ್ಮ ಭವಿಷ್ಯ ಯಶಸ್ವಿಯಾಗಲೆಂದು ಹಾರೈಸಿದರು.
ಎಪಿಎಂಸಿ ಮಾರುಕಟ್ಟೆಯ ವರ್ತಕ ರವಿ ಚನ್ನಸಂದ್ರ ಉಮೇಶ್ ಸೇರಿದಂತೆ ಇತರರು ನಿಖಿಲ್ ಕುಮಾರಸ್ವಾಮಿ ಬೃಹತ್ ಗುಲಾಬಿ ಹಾರ ಹಾಕಿ ಅಭಿನಂದಿಸಿದರು.





