Mysore
22
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್‌

I will inaugurate Dussehra as Chief Minister Siddaramaiah

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ. ನನಗೆ ಬೇರೆ ಆಯ್ಕೆಗಳೇ ಇಲ್ಲ. ಅವರನ್ನು ಬೆಂಬಲಿಸಲೇಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ನಂದಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಅವರನ್ನು ನಾನು ಬೆಂಬಲಿಸಲೇಬೇಕು. ಬೆಂಬಲಿಸುತ್ತೇನೆ. ಅವರ ಬೆನ್ನಿಗೆ ನಿಂತು ಸಹಕಾರ ಕೊಡುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ಲಕ್ಷಾಂತರ ಕಾರ್ಯಕರ್ತರು ಪಕ್ಷವನ್ನು ಬೆಂಬಲಿಸುತ್ತಾರೆ. ನನ್ನಂತೆ ನೂರಾರು ಜನ ಶ್ರಮ ವಹಿಸಿ ದುಡಿದಿದ್ದಾರೆ ಎಂದಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ನನಗೆ ಬೇರೆ ಆಯ್ಕೆಗಳೇ ಇಲ್ಲ. ಅವರನ್ನು ಬೆಂಬಲಿಸಲೇಬೇಕು ಎಂದು ಹೇಳಿದ್ದಾರೆ.

Tags:
error: Content is protected !!