Mysore
21
light rain

Social Media

ಗುರುವಾರ, 01 ಜನವರಿ 2026
Light
Dark

ಕೈಕೊಟ್ಟ ಪ್ರೀತಿಸಿದ ಹುಡುಗಿ: ಮನನೊಂದ ಯುವಕ ಆತ್ಮಹತ್ಯೆ

Love Failure young man commits suicide

ಚಾಮರಾಜನಗರ : ಪ್ರೀತಿಸಿದ ಹುಡುಗಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.

24 ವರ್ಷದ ಸಂತೋಷ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

ಸಂತೋಷ್‌ ಹಾಗೂ ಸಾಗಡೆ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಆಕೆ ಬೇರೊಬ್ಬ ಯುವಕನಿಗೆ ಮೆಸೇಜ್‌ ಮಾಡುತ್ತಿದ್ದಳು. ಇದನ್ನು ಪ್ರಶ್ನಿಸಿದ ಸಂತೋಷ್‌ನಿಂದ ಯುವತಿ ಕೆಲ ದಿನಗಳಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ.

ಇದರಿಂದ ತೀವ್ರ ಮನನೊಂದಿದ್ದ ಸಂತೋಷ್‌, ನನ್ನ ಸಾವಿಗೆ ಆಕೆಯೇ ಕಾರಣ ಎಂದು ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ವಾಟ್ಸಪ್‌ ಸ್ಟೇಟಸ್‌ಗೆ ಹಾಕಿದ್ದ. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ತೆರಕಣಾಂಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!