Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ಹಲವು ನಿರ್ಣಯ ಕೈಗೊಂಡ ಸರ್ಕಾರ

Cabinet meeting at Nandi Hills Government takes several decisions

ಚಿಕ್ಕಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಹಾಗೂ ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು ಎಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಸಚಿವರೂ ಭಾಗಿಯಾಗಿದ್ದರು.

ಸಭೆಯಲ್ಲಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದ್ದು, ಹಲವು ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳನ್ನು ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಪ್ರತಿಪಕ್ಷಗಳ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಸರ್ಕಾರ ಬದಲಾವಣೆ ಮಾಡಿರುವ ಬೆನ್ನಲ್ಲೇ ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಬದಲಾಯಿಸಲು ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.

Tags:
error: Content is protected !!