ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿಂದು ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು.
ಜನಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವ ಮಹದೇವಪ್ಪ ಅವರು, ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು.
ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಹುಡುಕಿದ ಸಚಿವರು, ಇನ್ನುಳಿದ ಅಹವಾಲುಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮೈಸೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಎಲ್‌ಸಿ ಸಿ.ಎನ್. ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.





