ಮೈಸೂರು : ಪ್ರೀತಿಸುವಂತೆ ಒತ್ತಾಯಿಸಿ ಹಾಡುಹಗಲೇ ಮಹಿಳೆಗೆ ಚಾಕು ಇರಿದಿರುವ ಘಟನೆ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಾಂಡವಪುರ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ, ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಪೂರ್ಣಿಮಾ (36) ಚಾಕು ಇರಿತಕ್ಕೆ ಒಳಗಾದ ಮಹಿಳೆ. ಯುವಕ ಅಭಿಷೇಕ್ ಚಾಕು ಇರಿದಿರುವ ಆರೋಪಿಯಾಗಿದ್ದಾನೆ.
ಆರೋಪಿ ಅಭಿಷೇಕ್ ಪೂರ್ಣಿಮಾ ಅವರನ್ನು ಪ್ರೀತಿ ಮಾಡುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಮಹಿಳೆ ಇಲ್ಲ ಎಂದಿದ್ದಾಳೆ. ಇದಕ್ಕೆ ಸಿಟ್ಟಾದ ಆರೋಪಿ ಚಾಕುವಿನಿಂದ ಇರಿದಿದ್ದಾನೆ.
ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಪೂರ್ಣಿಮಾ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಈ ಸಂಬಂಧ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





