Mysore
23
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಮಾತನಾಡುತ್ತಿದ್ದಾರೆ: ಶಾಸಕ ಶ್ರೀವತ್ಸ

MLA Srivatsa

ಮೈಸೂರು: ಮುಂದಿನ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಆರ್‌ಎಸ್‌ಎಸ್‌ ಬ್ಯಾನ್‌ ಮಾಡುತ್ತೇವೆ ಎಂಬ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಮಾತನಾಡುತ್ತಿದ್ದಾರೆ. ಅವರು ಒಂದು ಗಂಟೆ ಆರ್‌ಎಸ್‌ಎಸ್ ಶಾಖೆಗೆ ಹೋಗಿ ಬರಲಿ. ಅಲ್ಲಿ ಏನು ನಡೆಯುತ್ತಿದೆ ಎಂಬುದು ಅವರಿಗೆ ಗೊತ್ತಾಗುತ್ತದೆ. ಆರ್‌ಎಸ್‌ಎಸ್ ಹೇಗೆ ದೇಶ ದ್ರೋಹಿ ಸಂಘಟನೆ. ಆರ್‌ಎಸ್‌ಎಸ್ ಬಗ್ಗೆ ತಿಳುವಳಿಕೆ ಇಲ್ಲದೆ ಪ್ರಿಯಾಂಕ ಖರ್ಗೆ ಮಾತಾಡುತ್ತಿದ್ದಾರೆ.

ಆರ್‌ಎಸ್‌ಎಸ್ ಬಗ್ಗೆ ಪ್ರಿಯಾಂಕ ಖರ್ಗೆಗೆ ಏನೂ ಗೊತ್ತಿಲ್ಲ. ಈ ಹಿಂದೆ ಇದೆ ಕಾಂಗ್ರೆಸ್ ಆರ್‌ಎಸ್‌ಎಸ್ ಬ್ಯಾನ್ ಮಾಡಿ. ಅದನ್ನು ಮತ್ತೆ ವಾಪಾಸ್ ತೆಗೆದುಕೊಂಡಿತ್ತು. ಆಗ ಪ್ರಿಯಾಂಕ ಖರ್ಗೆ ಶಾಲೆಗೆ ಹೋಗುತ್ತಿದ್ರು. ಹೀಗಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಪ್ರಿಯಾಂಕ ಖರ್ಗೆ ಮಾತು ನಿಜವಾಗೋದು. ಇನ್ನು ಇಪ್ಪತ್ತು ವರ್ಷ ಕಾಲ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತೆ. ಪ್ರಿಯಾಂಕ ಖರ್ಗೆ ಸುಮ್ಮನೆ ಕನಸು ಕಾಣುತ್ತಿದ್ದಾರೆ ಎಂದು ಕಿಡಿಕಾರಿದರು.

Tags:
error: Content is protected !!