Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮೈಸೂರು| ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ದಿಶಾ ಸಭೆ

Mysuru | DISHA Meeting Held Under the Leadership of Union Minister H.D. Kumaraswamy

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನಲ್ಲಿಂದು ದಿಶಾ ಸಭೆ ನಡೆಯಿತು.

ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಸುನೀಲ್‌ ಬೋಸ್‌, ಬಿಜೆಪಿ ಶಾಸಕ ಶ್ರೀವತ್ಸ,‌ ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್ ಸೇರಿದಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿ.ಪಂ ಸಿಇಒ ಯುಕೇಶ್, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿಸಿಪಿ‌ ಸುಂದರರಾಜ್ ಸೇರಿದಂತೆ ಅಧಿಕಾರಿ ವರ್ಗ ಭಾಗಿಯಾಗಿದ್ದರು. ಆದರೆ ದಿಶಾ ಸಭೆಯಲ್ಲಿ ಕೈ ಶಾಸಕರು ಹಾಗೂ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಸಹ ಗೈರಾಗಿದ್ದರು.

ದಿಶಾ ಸಭೆಯಲ್ಲಿ ಈ ಭಾಗದಲ್ಲಿ ಅನ್ನದಾತರು ಅನುಭವಿಸುತ್ತಿರುವ ಸಮಸ್ಯೆಗಳು ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳ ಕೊರತೆ ಸೇರಿದಂತೆ ಹಲವು ವಿಚಾರಗಳನ್ನು ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!