Mysore
27
broken clouds

Social Media

ಶುಕ್ರವಾರ, 23 ಜನವರಿ 2026
Light
Dark

ತಮಿಳುನಾಡು| ಶಾಲಾ ವಾಹನಕ್ಕೆ ರೈಲು ಡಿಕ್ಕಿ: ಇಬ್ಬರು ಸಾವು, ಅನೇಕ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Train hits school vehicle: Two dead many students seriously injured

ಕಡಲೂರು: ಇಲ್ಲಿನ ರೈಲ್ವೆ ಕ್ರಾಸಿಂಗ್‌ನಲ್ಲಿ ರೈಲೊಂದು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ.

ತಿರುಚೆಂದೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಪ್ಯಾಸೆಂಜರ್‌ ರೈಲು ಶಾಲಾ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ರೈಲು ಬರುವ ಮುನ್ನ ಗೇಟ್‌ ಕೀಪರ್‌ ರೈಲ್ವೆ ಗೇಟ್ ಮುಚ್ಚದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ವೇಳೆ ಘಟನೆಗೆ ಶಾಲಾ ವಾಹನದ ಚಾಲಕನ ನಿರ್ಲಕ್ಷ್ಯ ಕೂಡ ಕಾರಣ ಎಂದು ಪ್ರತ್ಯಕ್ಷದರ್ಶಿ ಮಾಹಿತಿ ನೀಡಿದ್ದಾರೆ.

ಇನ್ನು ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಅಪಘಾತದ ನಿಖರ ಕಾರಣ ತಿಳಿಯಲು ಹಾಗೂ ಹೊಣೆಗಾರಿಕೆ ಅರಿಯಲು ಆರ್‌ಪಿಎಫ್‌ನಿಂದ ಪ್ರಾಥಮಿಕ ತನಿಖೆ ನಡೆಸಲಾಗುತ್ತಿದೆ.

ಇನ್ನು ಮೃತರ ಕುಟುಂಬಕ್ಕೆ 5 ಲಕ್ಷ ರೂ, ತೀವ್ರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ ಹಾಗೂ ಇತರೆ ಗಾಯಗೊಂಡವರಿಗೆ 50,000 ರೂ ಪರಿಹಾರವನ್ನು ರೈಲ್ವೆ ಇಲಾಖೆ ಘೋಷಣೆ ಮಾಡಿದೆ.

Tags:
error: Content is protected !!