Mysore
34
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಇನ್ನು 10 ದಿನದೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆ: ಮಾಜಿ ಶಾಸಕ ಎಲ್.ನಾಗೇಂದ್ರ

State BJP president's name to be announced within 10 days L Nagendra

ಮೈಸೂರು: ಇನ್ನು 10 ದಿನದೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ವಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಹಲವು ನಾಯಕರು ಆಗಾಗ ಧ್ವನಿ ಎತ್ತುತ್ತಲೇ ಬಂದಿದ್ದಾರೆ. ಮುಖ್ಯವಾಗಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಕುಮಾರ್‌ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ವಿಜಯೇಂದ್ರ ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವುದು ಬೇಡ ಎಂದು ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ ರಾಷ್ಟ್ರೀಯ ಅಧ್ಯಕ್ಷರ ಜೊತೆ ಕೆಲ ರಾಜ್ಯಗಳ ಅಧ್ಯಕ್ಷರ ಹೆಸರನ್ನು ಇನ್ನು ಕೆಲವೇ ದಿನಗಳಲ್ಲಿ ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಶಾಸಕ ಹಾಗೂ ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ ಅವರು, ಇನ್ನು 10 ದಿನದೊಳಗೆ ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆ ಆಗುತ್ತದೆ ಎಂದು ಹೇಳಿದ್ದಾರೆ.

ಇನ್ನು ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಯಾವುದೇ ಭಿನ್ನಮತದ ಸಭೆ ನಡೆಸಿಲ್ಲ. ಮಾಜಿ ಸಂಸದರ ಜನ್ಮದಿನದ ಆಚರಣೆ ಮಾಡ್ತಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

Tags:
error: Content is protected !!