Mysore
14
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ರಾಜ್ಯ ಅಭಿವೃದ್ಧಿಗೆ ಬಿಜೆಪಿ ಅಧಿಕಾರ ನೀಡಿ : ಸಂಸದ ಯದುವೀರ್‌

Give BJP power for state development MP Yaduveer

ಸೋಮವಾರಪೇಟೆ : ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರು ಹಾಗೂ ರೈತರ ಕಷ್ಟಕ್ಕೆ ಸ್ಪಂದಿಸಲು ಸದಾ ಸಿದ್ಧನಿದ್ದೇನೆ. ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಭಾರತೀಯ ಜನತಾ ಪಕ್ಷದ ವತಿಯಿಂದ ಶಕ್ತಿ ಕೇಂದ್ರಗಳ ಭೇಟಿ ಹಾಗೂ ಸ್ಥಳೀಯವಾಗಿ ಸಮಸ್ಯೆ ಬಗ್ಗೆ ತಿಳಿಯಲು ಮತ್ತು ಪಕ್ಷದ ಸಂಘಟನಾತ್ಮಕ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ಐಗೂರು, ಕಿರಗಂದೂರು, ಶಾಂತಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ನಂತರ ತೋಳೂರು ಶೆಟ್ಟಳ್ಳಿಯ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊಡಗು ಜಿಲ್ಲೆಯಲ್ಲಿ ಅಮೃತ್-೨ ಯೋಜನೆಯಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಈ ಸಂಬಂಧ ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮ ಸಡಕ್ ಯೋಜನೆ ಹಾಗೂ ಎನ್‌ಡಿಆರ್‌ಎಫ್ ಮುಖಾಂತರ ರಸ್ತೆ ಕಾಮಗಾರಿಗಳನ್ನು ಮುಂದುವರಿಸಲಾಗುವುದು ಎಂದರು.

ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶ ಮುನ್ನಡೆಯುತ್ತಿದ್ದು, ಪ್ರಧಾನಿ ಮೋದಿ ಅವರು ವಿಶ್ವ ನಾಯಕನಾಗಿ ಹೊರಹೊಮ್ಮಿದ್ದಾರೆ. ಭಾರತದ ಸೇನೆ ಮತ್ತು ಸಂಸ್ಕ ತಿಯು ವಿಶ್ವಮಟ್ಟದಲ್ಲಿ ಗುರುತನ್ನು ಪಡೆಯುವಲ್ಲಿ ಮೋದಿಜಿಯವರು ಶ್ರಮಿಸಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಅಪ್ಪಚು ರಂಜನ್ ಮಾತನಾಡಿ, ಸಿ ಮತ್ತು ಡಿ ಜಾಗದ ಆದೇಶವನ್ನು ಹಿಂಪಡೆಯುವಲ್ಲಿ ಸರ್ಕಾರ ವಿ-ಲವಾಗಿದೆ. ನಮ್ಮ ಸರ್ಕಾರ ಇದ್ದಾಗ ರೈತರಿಗೆ ಪಟ್ಟೆ ಕೊಡುವ ಕೆಲಸ ಮಾಡಿತ್ತು. ಬಿಜೆಪಿ ಸರ್ಕಾರ ಅಽಕಾರದಲ್ಲಿ ಇದ್ದಾಗ ಎಲ್ಲ ಜನಾಂಗವನ್ನೂ ಸಮಾನತೆಯಲ್ಲಿ ನೋಡುವ ಕೆಲಸ ಮಾಡುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಒಂದೇ ಜನಾಂಗವನ್ನು ಮೇಲೇತ್ತುವ ಕೆಲಸ ಮಾಡುತ್ತಿದೆ. ಸಚಿವರ ಕಚ್ಚಾಟದಿಂದ ಇನ್ನು ಒಂದು ವರ್ಷದಲ್ಲಿ ಸರ್ಕಾರ ಬಿದ್ದು ಹೋಗುತ್ತದೆ ಎಂದು ಭವಿಷ್ಯ ನುಡಿದರು.

ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮಾತನಾಡಿ, ಜನರಿಗೆ ತೊಂದರೆ ಕೊಡುವ ಕೆಲಸ ಕಾಂಗ್ರೆಸ್ ಸರ್ಕಾರದಿಂದ ಆಗುತ್ತಿದೆ. ಮಲೆನಾಡು ಭಾಗದ ಜನರ ಸಮಸ್ಯೆಗಳ ಬಗ್ಗೆ ಯಾವ ಶಾಸಕರು ಸಹ ಸದನದಲ್ಲಿ ಧ್ವನಿ ಎತ್ತುವ ಕೆಲಸ ಮಾಡುತ್ತಿಲ್ಲ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಕಾಫಿ ಫಸಲು ಹಾನಿಯಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಪರಿಹಾರ ಕೊಡುತ್ತಿಲ್ಲ. ಈ ವರ್ಷವಾದರೂ ರೈತರಿಗೆ ಮತ್ತು ಕಾಫಿ ಬೆಳೆಗಾರರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು

ಈ ಸಂದರ್ಭದಲ್ಲಿ ಸ್ಥಳೀಯವಾಗಿ ಇರುವ ನೆಟ್‌ವರ್ಕ್ ಸಮಸ್ಯೆ, ಕಾಫಿ ಬೆಳೆಗಾರರ ಸಮಸ್ಯೆ ಹಾಗೂ ಸಿ ಮತ್ತು ಡಿ ಜಾಗದ ಸಮಸ್ಯೆ ಬಗ್ಗೆ ಸಂಸದರಿಗೆ ಸ್ಥಳೀಯರು ಮನವಿ ಸಲ್ಲಿಸಿದರು.

ತೋಳುರುಶೆಟ್ಟಳ್ಳಿ ಗ್ರಾ.ಪಂ ಅಧ್ಯಕ್ಷೇ ಭವಾನಿ ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಂಡಲ ಅಧ್ಯಕ್ಷ ಗೌತಮ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಮೋಹಿತ್ ತಿಮ್ಮಯ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಕವಿತಾ ವಿರೂಪಾಕ್ಷ, ಪ್ರಮುಖರಾದ ಬಿ.ಬಿ.ಭಾರತೀಶ್, ವಿ.ಕೆ.ಲೋಕೇಶ್, ಬಿ.ಜೆ.ದೀಪಕ್, ಧರ್ಮಪ್ಪ, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಕಾರ್ಯಕರ್ತರು ಹಾಜರಿದ್ದರು.

Tags:
error: Content is protected !!