Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ಪಾಂಡವಪುರ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ ; ಅಧಿಕಾರಿಗಳಿಗೆ ಕ್ಲಾಸ್‌

Deputy Commissioner makes surprise visit to Pandavapura Taluk office

ಮಂಡ್ಯ : ಜಿಲ್ಲಾಧಿಕಾರಿ ಡಾ.ಕುಮಾರ ಅವರು ಗುರುವಾರ ಪಾಂಡವಪುರ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ತಾಲ್ಲೂಕು ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕರಿಸಿ, ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ತಾಲ್ಲೂಕು ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.

ಈ ವೇಳೆ ಸಾರ್ವಜನಿಕರನ್ನು ಅಲೆದಾಡಿಸುವುದರ ಬಗ್ಗೆ ದೂರು ಬಂದಾಗ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಾರ್ವಜನಿಕರನ್ನು ಕಾರಣವಿಲ್ಲದೇ ತಾಲ್ಲೂಕು ಕಚೇರಿಗೆ ಅಲೆದಾಡಿಸುವುದು, ನಿಗದಿತ ಸಮಯಕ್ಕೆ ಅರ್ಜಿ ವಿಲೇವಾರಿ ಮಾಡದೆ ಇರುವುದು ಕಂಡುಬಂದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ನಂತರ ತಾಲ್ಲೂಕು ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಕಡತ ಹಾಗೂ ವಹಿಗಳನ್ನು ಪರಿಶೀಲಿಸಿದರು. ಈ ವೇಳೆ ಪಾಂಡವಪುರ ತಾಲ್ಲೂಕು ತಹಸಿಲ್ದಾರ್ ಹಾಜರಿದ್ದರು.

Tags:
error: Content is protected !!