ಕುಶಾಲನಗರ : ಲಾರಿ ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ನಾಪೋಕ್ಲು ಕೊಟ್ಟಮುಡಿ ಗ್ರಾಮದ ಅಬ್ದುಲ್ ಸಲಾಂ ಮೃತಪಟ್ಟ ವ್ಯಕ್ತಿ. ಗುರುವಾರ ಬೆಳಗಿನ ಜಾವ ಮೈಸೂರಿಗೆ ತೆರಳುತ್ತಿದ್ದ ಲಾರಿಯು ಅಬ್ದುಲ್ ಸಲಾಂ ತಲೆ ಮೇಲೆ ಹರಿದಿದೆ. ಮೃತ ಅಬ್ದುಲ್ ಮಾನಸಿಕ ಅಸ್ವಸ್ಥನಂತೆ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ರಾತ್ರಿ ಹೆದ್ದಾರಿ ಅಂಚಿನಲ್ಲಿ ರಸ್ತೆಗೆ ತಲೆಹಾಕಿ ಮಲಗಿದ್ದ ಈತನ ಮೇಲೆ ಲಾರಿ ಹರಿದ ಪರಿಣಾಮ ಮೃತಪಟ್ಡಿದ್ದಾನೆ ಎಂದು ಹೇಳಲಾಗಿದೆ. ಕುಶಾಲನಗರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.





