Mysore
28
haze

Social Media

ಗುರುವಾರ, 01 ಜನವರಿ 2026
Light
Dark

ದಿಲ್ಲಿಯಲ್ಲಿ ತೀವ್ರತೆಯ ಭೂಕಂಪನ : ಬೆಚ್ಚಿ ಬಿದ್ದ ಜನತೆ

Strong earthquake in Delhi: People shocked

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಹರಿಯಾಣದ ಜಜ್ಜರ್‌ನಿಂದ ಈಶಾನ್ಯಕ್ಕೆ 4 ಕಿ.ಮೀ ದೂರದಲ್ಲಿದ್ದು, 14 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ದಿಲ್ಲಿ, ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಗಳಲ್ಲಿ ಭೂಕಂಪದ ಅನುಭವವಾಗಿದೆ. ಹರಿಯಾಣದ ರೋಹ್ಟಕ್‌ನಲ್ಲೂ ಪರಿಣಾಮ ಎದುರಿಸಲಾಗಿದ್ದು, ರಸ್ತೆಗಳಲ್ಲಿ ವಾಹನಗಳು ಅಲುಗಾಡಿದ ಅನುಭವವಾಗಿದೆ.

ಹರಿಯಾಣದ ಜಿಂದ್ ಮತ್ತು ಬಹದ್ದೂರ್‌ಗಢ ಹೊರತುಪಡಿಸಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪ್ರದೇಶಗಳು ಸಹ 10 ಸೆಕೆಂಡುಗಳ ಕಾಲ ಕಂಪನವನ್ನು ಅನುಭವಿಸಿದವು. ಕಳೆದ ಆರು ತಿಂಗಳಲ್ಲಿ ದಿಲ್ಲಿ ಮತ್ತು ಎನ್‌ಸಿಆರ್‌ನಲ್ಲಿ ಇದು ಮೂರನೇ ಭೂಕಂಪವಾಗಿದೆ. ಇದಕ್ಕೂ ಮೊದಲು, ಏಪ್ರಿಲ್ 19 ಮತ್ತು ಫೆಬ್ರವರಿ 17 ರಂದು ಸಹ ಭೂಕಂಪಗಳು ಸಂಭವಿಸಿದ್ದವು.

ಭೂಕಂಪನದ ಜೊತೆಗೆ ದಿಲ್ಲಿ ಮತ್ತು ಎನ್‌ಸಿಆರ್ ನಲ್ಲಿ ಬುಧವಾರ ಸಂಜೆಯಿಂದ ಮಳೆಯಾಗುತ್ತಿದೆ. ಈ ಮಳೆ ಈ ಮಾನ್ಸೂನ್‌ನಲ್ಲಿ ಅತ್ಯಂತ ಹೆಚ್ಚಿನ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಈ ರಣಮಳೆ ಸುರಿದಿದೆ. ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.

Tags:
error: Content is protected !!