Mysore
22
overcast clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ರಾಜೀನಾಮೆ ಕೊಟ್ಟು ಕನ್ನಡಿಗರ ಆಶಯ ಈಡೇರಿಸಿ: ವಿಪಕ್ಷ ನಾಯಕ ಆರ್‌.ಅಶೋಕ್‌

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ಐದು ವರ್ಷ ನಾನೇ ಸಿಎಂ ಎಂದು ಬೊಬ್ಬೆ ಹೊಡೆಯುವ ಸಿದ್ದರಾಮಯ್ಯಗೆ 25,000ಕ್ಕೂ ಹೆಚ್ಚು ಪಾಲಿಕೆ ಸಿಬ್ಬಂದಿಗಳ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿದ್ದರಾಮಯ್ಯ ಅವರು, 5 ವರ್ಷ ನಾನೇ ಸಿಎಂ ಎಂದು ಹಳ್ಳಿಯಿಂದ ದಿಲ್ಲಿಯವರೆಗೂ ಹಾದಿ ಬೀದಿಯಲ್ಲಿ ಬೊಬ್ಬೆ ಹೊಡೆಯುತ್ತಿದ್ದಾರೆ. ಈ ಹೇಳಿಕೆ ನೀಡುತ್ತಾ ಬರೀ ಕಾಲಹರಣ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ರಾಜ್ಯಾದ್ಯಂತ 10 ಪಾಲಿಕೆಗಳ 25,000ಕ್ಕೂ ಹೆಚ್ಚಿನ ಸಿಬ್ಬಂದಿಗಳು ಕಳೆದ ಐದು ದಿನಗಳಿಂದ ಮುಷ್ಕರ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರ ಕಣ್ಣಿಗೆ ಕಾಣಿಸುತ್ತಿಲ್ಲ, ಕಿವಿಗೂ ಬೀಳುತ್ತಿಲ್ಲ. ಕುರ್ಚಿ ಕಿತ್ತಾಟದಲ್ಲಿ, ಬಣ ಬಡಿದಾಟದಲ್ಲಿ ಸಂಪೂರ್ಣವಾಗಿ ಮೈಮರೆತಿರುವ ರಾಜ್ಯ ಸರ್ಕಾರದ ಯಾವ ಮಂತ್ರಿಗಳೂ ಇದುವರೆಗೂ ಪ್ರತಿಭಟನಾ ನಿರತ ಪಾಲಿಕೆ ಸಿಬ್ಬಂದಿಗಳನ್ನು ಭೇಟಿ ಮಾಡುವ ಗೋಜಿಗೆ ಹೋಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರೇ ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬಂತೆ ಅಧಿಕಾರವಿಲ್ಲದ ಕುರ್ಚಿಯಲ್ಲಿ ಎಷ್ಟು ದಿನ ಅಂಟಿಕೊಂಡು ಕೂರುತ್ತೀರಿ ಸ್ವಾಮಿ. ರಾಜೀನಾಮೆ ಕೊಟ್ಟು ಹೊರಡಿ. ಒಂದು ಸುಭದ್ರ ಸುಸ್ಥಿರ, ಜನಪರ ಆಡಳಿತ ಕೊಡಬಲ್ಲ ಬಲಿಷ್ಠಿ ಮುಖ್ಯಮಂತ್ರಿಗಾಗಿ ಕನ್ನಡಿಗರು ಕಾಯುತ್ತಿದ್ದಾರೆ. ರಾಜೀನಾಮೆ ಕೊಟ್ಟು ಕನ್ನಡಿಗರ ಆಶಯ ಈಡೇರಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

Tags:
error: Content is protected !!