Mysore
15
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ: ಮೂವರು ಸಾವು

Bengaluru-Mysore Expressway

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನ ಜಯಪುರ ಗೇಟ್‌ ಬಳಿ ಇಂದು ಮುಂಜಾನೆ ನಡೆದಿದೆ.

ಮೂಲತಃ ಕೆ.ಆರ್‌.ನಗರದ ಚಿಕ್ಕನಾಯಕನಹಳ್ಳಿಯ ತಮಣ್ಣ ಗೌಡ (56), ಇವರ ಪುತ್ರ ಮುತ್ತುರಾಜ್‌ (28) ಹಾಗೂ ಹಾಸನ ಮೂಲದ ಚಾಲಕ ಸಚಿನ್‌ (27) ಮೃತಪಟ್ಟ ದುರ್ದೈವಿಗಳು.

ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಾಗಿದ್ದ ಇವರು ಮಡುವಿನಕುಡಿ ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ತೆರಳಿ ಭಾನುವಾರ ಮುಂಜಾನೆ ಮೈಸೂರು ಕಡೆಯಿಂದ ಬೆಂಗಳೂರಿಗೆ ಸ್ವಿಫ್ಟ್ ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ಮುಂಜಾನೆ 5 ಗಂಟೆ ಸಮಯದಲ್ಲಿ ಜಯಪುರ ಗೇಟ್‌ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಾಲನೆ ಮಾಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ರಾಮನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!