ತಿರುವನಂತಪುರಂ: ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ನಿವಾಸಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.
ಪಿಣರಾಯಿ ವಿಜಯನ್ ಅಧಿಕೃತ ನಿವಾಸ ಕ್ಲಿಪ್ ಪೌಸ್ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ.
ತಂಪನೂರು ಪೊಲೀಸ್ ಠಾಣೆಗೆ ಇ-ಮೇಲ್ ಮೂಲಕ ಸಂದೇಶ ರವಾನಿಸಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಆದರೆ ಮನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಅಲ್ಲದೇ ಇದೊಂದು ಹುಸಿ ಬಾಂಬ್ ಕರೆ ಎಂದು ದೃಢಪಟ್ಟಿದೆ.
ಬಾಂಬ್ ಬೆದರಿಕೆ ಹಾಕಿರುವ ಆರೋಪಿಗ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





