ನಂಜನಗೂಡು: ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 234ನೇ ಜನ್ಮದಿನದ ಹಿನ್ನೆಲೆಯಲ್ಲಿ ಅರಸು ಮಂಡಳಿಯಿಂದ ನಂಜನಗೂಡಿನಲ್ಲಿ ಉತ್ಸವಮೂರ್ತಿ ಮೆರವಣಿಗೆ ಮಾಡಲಾಯಿತು.
ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಮೈಸೂರು ರಾಜಮನೆತನ ಶ್ರೀಕಂಠೇಶ್ವರನ ದರ್ಶನ ಪಡೆಯಿತು.
ಬಳಿಕ ದೇವಾಲಯದ ಸುತ್ತ ನಡೆದ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್, ಯುವರಾಣಿ ತ್ರಿಷಿಕಾ ಕುಮಾರಿ ಒಡೆಯರ್ ಅವರು, ಮಕ್ಕಳೊಂದಿಗೆ ಭಾಗಿಯಾಗಿದ್ದರು





