Mysore
33
clear sky

Social Media

ಬುಧವಾರ, 15 ಏಪ್ರಿಲ 2026
Light
Dark

ಸಿನಿಪ್ರಿಯರಿಗೆ ಗುಡ್‌ ನ್ಯೂಸ್‌ : ಚಿತ್ರಮಂದಿರಗಳಿಗೆ ಏಕರೂಪ ಟಿಕೆಟ್ ದರ

ಬೆಂಗಳೂರು: ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಇನ್ನು ಮುಂದೆ  ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ.  ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ.

ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ.

ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿಯೇ ಪರಭಾಷೆ ಸಿನಿಮಾಗಳು ಬಹುಕೋಟಿ ರೂಪಾಯಿ ಮಾಡಿಕೊಳ್ಳುತ್ತವೆ. ಪರಭಾಷೆ ಸಿನಿಮಾಗಳ ಟಿಕೆಟ್‌ಗಳು ಸಾವಿರ ರೂಪಾಯಿ ಮೀರಿದ ಉದಾಹರಣೆ ಕೂಡ ಇದೆ. ಆದ್ದರಿಂದ ಟಿಕೆಟ್ ಬೆಲೆ ಕಡಿಮೆ ಆಗಬೇಕು ಎಂಬುದು ಬಹುದಿನಗಳ ಬೇಡಿಕೆ ಆಗಿತ್ತು.
2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸರ್ಕಾರ ಈ ಬಗ್ಗೆ ಪ್ರಕಟಿಸಿತ್ತು. ಮಲ್ಟಿಪ್ಲೆಕ್ಸ್‌ಗಳಲ್ಲಿ ಎಗ್ಗಿಲ್ಲದೇ ಏರಿಕೆ ಆಗುತ್ತಿದ್ದ ಟಿಕೆಟ್ ಬೆಲೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿತ್ತು.

 

Tags:
error: Content is protected !!