Mysore
19
overcast clouds

Social Media

ಮಂಗಳವಾರ, 27 ಜನವರಿ 2026
Light
Dark

ರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣ: ಮಾಜಿ ಸಚಿವ ಭೈರತಿ ಬಸವರಾಜ್‌ ಹೆಸರು ತಳುಕು

Byrathi Basavaraj

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್‌ ಹೆಸರು ತಳುಕು ಹಾಕಿಕೊಂಡಿದ್ದು, ಮೃತನ ತಾಯಿ ವಿಜಯಲಕ್ಷ್ಮೀ ನೀಡಿರುವ ದೂರಿನ ಮೇರೆಗೆ ಭೈರತಿ ಬಸವರಾಜ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಭಾರತೀನಗರ ಠಾಣೆಯಲ್ಲಿ ಭೈರತಿ ಬಸವರಾಜ್‌ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಭೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಿತ್ತನೂರು ಜಾಗದ ವಿಚಾರವಾಗಿ ರೌಡಿಶೀಟರ್‌ ಶಿವಪ್ರಕಾಶ್‌ ಕೊಲೆ ಮಾಡಲಾಗಿದೆ. ಕಾರಿನಲ್ಲಿ ಬಂದಿದ್ದ 8-9 ಜನರು ಶಿವಪ್ರಕಾಶ್‌ಗೆ ಬೆದರಿಕೆ ಹಾಕಿದ್ದರು. ಭೈರತಿ ಬಸವರಾಜ್‌ ಸೇರಿದಂತೆ ಹಲವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಲವು ಬಾರಿ ಮಗ ಹೇಳುತ್ತಿದ್ದ ಎಂದು ತಾಯಿ ವಿಜಯಲಕ್ಷ್ಮೀ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇನ್ನು ಈ ಪ್ರಕರಣ ಸಂಬಂಧ ಮಾತನಾಡಿರುವ ಮಾಜಿ ಸಚಿವ ಭೈರತಿ ಬಸವರಾಜ್‌ ಅವರು, ರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆತ ಯಾರೆಂಬುದೂ ನನಗೆ ಗೊತ್ತಿಲ್ಲ. ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಲಾಗಿದೆ. ಸುಖಾ‌ ಸುಮ್ಮನೆ ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ. ಯಾರೋ ದೂರು ನೀಡಿದರು ಎಂದ ಮಾತ್ರಕ್ಕೆ ಎಫ್‌ಐಆರ್‌ ದಾಖಲಿಸಬಹುದಾ? ಎಫ್‌ಐಆರ್‌ ದಾಖಲಿಸುವಾಗ ನನಗೆ ಮಾಹಿತಿ ಕೂಡ ನೀಡಿಲ್ಲ. ಈ ನಿಟ್ಟಿನಲ್ಲಿ ನಾನು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

Tags:
error: Content is protected !!