ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಿಗೆ ಸಂಬಂಧಿಸಿದ ಭೂಸ್ವಾಧೀನ ಅಧಿಸೂಚನೆಯನ್ನು ಕೈಬಿಡಲು ಸರ್ಕಾರ ತೀರ್ಮಾನಿಸಿದೆ, ಆದರೆ ಜಮೀನು ನೀಡಲು ತಾವಾಗೇ ಒಪ್ಪುವ ರೈತರಿಗೆ ಹೆಚ್ಚಿನ ದರ ನೀಡುವುದಲ್ಲದೆ ಅಭಿವೃದ್ಧಿಪಡಿಸಿದ ಜಮೀನನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಕೆಐಎಡಿಬಿಯಿಂದ ೧,೭೭೭ ಎಕರೆ ಫಲವತ್ತಾದ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು ವಿರೋಧಿಸಿ ರೈತರು ೧,೨೦೦ ದಿನಗಳಿಂದ ಹೋರಾಟ ನಡೆಸುತ್ತಿದ್ದರು. ಕೊನೆಗೂ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿರುವುದು ಸ್ವಾಗತಾರ್ಹ. ದೇವನಹಳ್ಳಿ ತಾಲ್ಲೂಕಿನ ರೈತರು, ರೈತ ಸಂಘಟನೆಗಳು ಹಾಗೂ ಈ ಹೋರಾಟದಲ್ಲಿ ಪರೋಕ್ಷವಾಗಿ ಹಾಗೂ ಪ್ರತ್ಯಕ್ಷವಾಗಿ ಬೆಂಬಲ ನೀಡಿದ ಪ್ರತಿಯೊಬ್ಬರೂ ಅಭಿನಂದನಾರ್ಹರು.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





