ಮೈಸೂರು: ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ.
ಇದು ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನದ ವೇದಿಕೆ ಎಂದೇ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿವೆ.
ಸಿಎಂ ತವರು ಜಿಲ್ಲೆಯಲ್ಲಿ ಬೆಂಬಲಿಗರು, ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಮಾಡುವ ಮೂಲಕ ವಿರೋಧಿಗಳು ಹಾಗೂ ಹೈಕಮಾಂಡ್‌ಗೆ ಸಂದೇಶ ರವಾನಿಸಲು ಈ ಸಮಾವೇಶ ಆಯೋಜನೆ ಮಾಡಿದ್ದಾರೆ.
ಈ ಸಮಾವೇಶಕ್ಕೆ ಲಕ್ಷಕ್ಕೂ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದ್ದು, ಬರೋಬ್ಬರಿ 2569 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕೂಡ ನಡೆಯಲಿದೆ.
ಸಮಾವೇಶಕ್ಕೆ ಇಂತಿಷ್ಟು ಜನರನ್ನು ಕರೆತರಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.





