Mysore
16
few clouds

Social Media

ಶುಕ್ರವಾರ, 30 ಜನವರಿ 2026
Light
Dark

ಮೈಸೂರಿಗರಿಗೆ ಸಿಹಿಸುದ್ದಿ: ಇಂಡಿಗೋ ಏರ್‌ಲೈನ್ಸ್‌ಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌

Good news for Mysoreans: MP Yaduveer Wadiyar writes letter to IndiGo Airlines

ಮೈಸೂರು: ಮೈಸೂರು ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಗೆ ಪತ್ರ ಬರೆದಿದ್ದಾರೆ.

ಕೂಡಲೇ ಮುಂಬೈ, ಚೆನ್ನೈ, ಹೈದರಾಬಾದ್‌, ಗೋವಾ ಸೇರಿದಂತೆ ಪ್ರಮುಖ ನಗರಗಳಿಗೆ ಮೈಸೂರಿನಿಂದ ವಿಮಾನ ಸೇವೆ ಆರಂಭಿಸುವಂತೆ ಮನವಿ ಮಾಡಿದ್ದಾರೆ.

ಈ ಪ್ರಮುಖ ನಗರಗಳಿಗೆ ವಿಮಾನಯಾನ ಸೇವೆ ಆರಂಭಿಸಿದರೆ ಉದ್ಯಮಿಗಳಿಗೆ, ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಯದುವೀರ್‌ ಒಡೆಯರ್‌ ಅವರು, ಅತೀ ಶೀಘ್ರದಲ್ಲೇ ಈ ವಿಷಯದ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸ ನನಗಿದೆ. ಇಂಡಿಗೋ ಏರ್‌ಲೈನ್ಸ್‌ ಈ ಸೇವೆಯನ್ನು ಆರಂಭಿಸುವ ಕುರಿತು ಸೂಕ್ತ ಭರವಸೆ ನೀಡಿದೆ. ಈ ವಿಮಾನ ಸೇವೆಗಳು ಆರಂಭವಾದರೆ ನಮ್ಮ ಮೈಸೂರು ಜನರಿಗೆ ಅತ್ಯಂತ ಹೆಚ್ಚು ಪ್ರಯೋಜನವಾಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Tags:
error: Content is protected !!