Mysore
25
haze

Social Media

ಗುರುವಾರ, 29 ಜನವರಿ 2026
Light
Dark

ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Basava Jayamruthyunjaya Swamiji’s health condition varies

ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ಹೋರಾಟಗಳನ್ನು ನಡೆಸುತ್ತಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸವ ಜಯಮೃತ್ಯುಂಜಯ ಸ್ವಾಮೀಜಿ ತಲೆನೋವು, ವಾಂತಿ, ಎದೆನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ವಾಮೀಜಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಶಿಷ್ಯರು ಹಾಗೂ ಸಮುದಾಯದವರಿಗೆ ಆತಂಕ ಮನೆಮಾಡಿದ್ದು, ಆದಷ್ಟು ಬೇಗ ಶ್ರೀಗಳು ಗುಣಮುಖರಾಗಿ ಸೇವೆಗೆ ಮರಳಲಿ ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ.

Tags:
error: Content is protected !!