ಮಲ್ಕುಂಡಿ : ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಯೇ ನನ್ನ ಗುರಿಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಸಮೀಪದ ಸಿದ್ದಯ್ಯನಹುಂಡಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರಕ್ಕೆ 2 ವರ್ಷಗಳಲ್ಲಿ 400 ಕೋಟಿ ರೂ. ಅನುದಾನ ನೀಡಲಾಗಿದೆ. ನಾನು ಕೂಡ ಸರ್ಕಾರದಿಂದ ಬಂದಿರುವ ಅನುದಾನದಲ್ಲಿ ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರದಲ್ಲಿ ಉಳಿದಿರುವ ಕಾಮಗಾರಿಗಳನ್ನು ಕೈಗೆತ್ತುಕೊಂಡು ಹಂತ ಹಂತವಾಗಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಕೆ.ಜಿ.ಮಹೇಶ್, ಶಿವಪ್ಪದೇವರು, ಎಇ ಶರಣ್, ಇಂಜಿನಿಯರ್ ಪುರುಷೋತ್ತಮ್, ಸುಕೇತರಾಜು, ಜಯಶೇಖರ, ಮಹದೇವಪ್ಪ, ಅರುಣ್ ಕುಮಾರ್, ಸುರೇಶ್, ಮಹಾಲಿಂಗಪ್ಪ, ಕುಮಾರ್, ಕೀರ್ತಿರಾಜು, ಕೆ.ಎಂ.ಶಿವಪ್ಪ, ಕಸುವಿನಹಳ್ಳಿ ಪಿಎಸಿಸಿಎಸ್ ಅಧ್ಯಕ್ಷ ಕೆ.ಎನ್.ಚಿನ್ನಸ್ವಾಮಿ, ಗ್ರಾಪಂ ಸದಸ್ಯ ಕೆ.ಎನ್. ಮಲ್ಲೇಶ್, ಇತರರು ಹಾಜರಿದ್ದರು.





