Mysore
18
overcast clouds

Social Media

ಬುಧವಾರ, 28 ಜನವರಿ 2026
Light
Dark

ಮುಂಗಾರು ಚುರುಕು : ಕೊಡಗಿಗೆ ರೆಡ್‌, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಶನಿವಾರ ಕೂಡ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಭಾನುವಾರವೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್ : ಮೈಸೂರು, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಬೀದರ್, ಕಲಬುರಗಿ ಮತ್ತು ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ದಾವಣಗೆರೆಯಲ್ಲಿ ಜುಲೈ ೨೦ರಿಂದ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಾಲಾ-ಕಾಲೇಜುಗಳಿಗೆ ಇಂದು ರಜೆ : ಭಾರಿ ಮಳೆಯಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ ಹಾಗೂ ಉಳ್ಳಾಲ ತಾಲೂಕು ವ್ಯಾಪ್ತಿಯ ಅಂಗನವಾಡಿ ಸೇರಿದಂತೆ ಇತರ ಶಾಲೆಗಳಿಗೂ ಶನಿವಾರ ರಜೆ ಘೋಷಿಸಲಾಗಿತ್ತು. ಜೊತೆಗೆ ನದಿ, ಸಮುದ್ರ ತೀರ ಪ್ರದೇಶಕ್ಕೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ೪೮ ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಗಂಟೆಗೆ ೩೦-೪೦ ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags:
error: Content is protected !!