Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ನಂಜನಗೂಡು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

Nanjangud: Man Arrested for Selling Ganja

ನಂಜನಗೂಡು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.

ನಂಜನಗೂಡು ಪಟ್ಟಣದ ನಿವಾಸಿ ಮೊಹಮ್ಮದ್‌ ಮಸೂದ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ಸ್‌ಪೆಕ್ಟರ್ ಸಿ.ಎಂ ರವೀಂದ್ರ, ಪಿಎಸ್ಐ ಕೃಷ್ಣಕಾಂತಕೋಳಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ. ಬಂಧೀತ ಆರೋಪಿಯಿಂದ 540 ಗ್ರಾಂ ಗಾಂಜಾ, 550 ರೂ. ನಗದು ಹಣ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Tags:
error: Content is protected !!