Mysore
29
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಕೊಡಗು ಜಿಲ್ಲೆಯಲ್ಲಿ ರಿವರ್ ರ‍್ಯಾಫ್ಟಿಂಗ್‌ಗೆ (ಜಲಕ್ರೀಡೆ) ಜೀವಕಳೆ

river rafting started in kodagu

ಮಡಿಕೇರಿ: ಪ್ರವಾಸಿಗರ ಹಾಟ್‌ಸ್ಪಾಟ್ ಕೊಡಗು ಜಿಲ್ಲೆಯಲ್ಲಿ ರಿವರ್ ರ‍್ಯಾಫ್ಟಿಂಗ್ ಜೀವಕಳೆ ಪಡೆದುಕೊಂಡಿದ್ದು, ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ (ಜಲಕ್ರೀಡೆ) ಆರಂಭಗೊಂಡಿದೆ.

ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಪರಿಣಾಮ ನೀರಿನ ಹರಿವು ಹೆಚ್ಚಿದ್ದು, ರ‍್ಯಾಫ್ಟಿಂಗ್ ಮಾಡುವ ಪ್ರವಾಸಿಗರಿಗೆ ಇದು ಮತ್ತಷ್ಟು ಹೊಸ ಅನುಭವ ನೀಡುತ್ತಿದೆ.

ನದಿ ಹರಿಯುತ್ತಿರುವಾಗ ಅದರಲ್ಲಿ ರ‍್ಯಾಫ್ಟಿಂಗ್ ಮಾಡುವ ಅನುಭವವೇ ಬೇರೆ. ಅದರಲ್ಲೂ ಹೆಚ್ಚಿನ ಮಳೆಯಾದ ಇಂತಹ ಸಂದರ್ಭದಲ್ಲಿ ಜಲಸಾಹಸಗಳಲ್ಲಿ ಭಾಗವಹಿಸಲು ಪ್ರವಾಸಿಗರು ಮುಗಿ ಬೀಳುತ್ತಾರೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಜಿಲ್ಲಾಡಳಿತ ರಿವರ್‌ ರ‍್ಯಾಫ್ಟಿಂಗ್‌ಗೆ ಅನುಮತಿ ನೀಡಿದೆ. ಪರಿಣಾಮ ವೀಕೆಂಡ್‌ನಲ್ಲಿ ಕೊಡಗಿಗೆ ಪ್ರವಾಸಿಗರ ದಂಡೇ ಹರದು ಬರುತ್ತಿದೆ.

Tags:
error: Content is protected !!