Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

ಧರ್ಮಸ್ಥಳ ಪ್ರಕರಣದಲ್ಲಿ ಯಾವುದೇ ರಾಜಕೀಯ ಇಲ್ಲ: ಗೃಹ ಸಚಿವ ಪರಮೇಶ್ವರ್‌

Dharmasthala dead bodies burried case

ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಹಾಗೂ ಅಸಹಜ ಸಾವಿನ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ದಳದ ಸದಸ್ಯರಲ್ಲಿ ಯಾರಾದರೂ ಹಿಂದೆ ಸರಿಯಲು ಬಯಸಿದರೆ ರಾಜ್ಯ ಸರ್ಕಾರ ಬೇರೆಯವರನ್ನು ನೇಮಿಸಲು ಸಿದ್ಧವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ. ಅದರ ಮುಖ್ಯಸ್ಥರಾದ ಡಿಜಿಪಿ ಪ್ರಣವ್ ಮೊಹಂತಿ ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಲಭ್ಯ ಇರುವ ದಾಖಲಾತಿಗಳನ್ನು ಆಧರಿಸಿ ತನಿಖೆಯನ್ನು ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಈಗಾಗಲೇ ಎಸ್‍ಐಟಿ ಸಮಿತಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೂ ಸೂಚನೆ ನೀಡಿದ್ದಾರೆ ಎಂದರು.

ಸದ್ಯಕ್ಕೆ ಎಸ್‍ಐಟಿಯಲ್ಲಿ ಆದೇಶದಲ್ಲಿ ಉಲ್ಲೇಖಿಸಿರುವಂತೆ ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳು ಇರುತ್ತಾರೆ. ಒಂದು ವೇಳೆ ಯಾರಾದರೂ ಹಿಂದೆ ಸರಿಯಲು ಬಯಸಿದರೆ ಅವರನ್ನು ಪೊಲೀಸ್ ಮಹಾ ನಿರ್ದೇಶಕರು ಬದಲಾಯಿಸುತ್ತಾರೆ. ನಿನ್ನೆ ತಮಗೆ ಯಾರೋ ಮಾಹಿತಿ ನೀಡಿ ಕೆಲ ಅಧಿಕಾರಿಗಳು ಹಿಂದೆ ಸರಿಯುವ ಸಾಧ್ಯತೆಯಿದೆ ಎಂದಿದ್ದರು. ಮಾಧ್ಯಮದಲ್ಲೂ ಇದು ವರದಿಯಾಗಿತ್ತು. ಯಾವುದೇ ಕಾರಣಕ್ಕಾದರೂ ಹಿಂದೆ ಸರಿಯಲು ಮುಂದೆ ಬಂದರೆ ಆ ಸ್ಥಾನಕ್ಕೆ ಬೇರೆಯವರನ್ನು ನೇಮಿಸಲು ಎಲ್ಲಾ ಅವಕಾಶಗಳಿವೆ. ಅದೇನು ದೊಡ್ಡ ಸಮಸ್ಯೆಯಲ್ಲ ಎಂದು ಹೇಳಿದರು.

Tags:
error: Content is protected !!