Mysore
18
few clouds

Social Media

ಶನಿವಾರ, 24 ಜನವರಿ 2026
Light
Dark

ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣ: ಮತ್ತೆ ವಿಚಾರಣೆಗೆ ಹಾಜರಾದ ಶಾಸಕ ಭೈರತಿ ಬಸವರಾಜ್‌

Byrati basavaraj

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಹಿಂದೆ ಒಮ್ಮೆ ಭಾರತೀನಗರ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.

ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದು, ತನಿಖಾಧಿಕಾರಿ ಪ್ರಕಾಶ್‌ ರಾಥೋಡ್‌ ಅವರು ಭೈರತಿಯನ್ನು ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಸುಪಾರಿ ಕಿಲ್ಲರ್‌ಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಆದರೆ ಪ್ರಮುಖ ಆರೋಪಿ ಜಗದೀಶ್‌ ಚೆನ್ನೈ ಹೋಗಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪ್ರಮುಖ ಆರೋಪಿ ಜಗದೀಶ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಅಲ್ಲಿನ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

Tags:
error: Content is protected !!