Mysore
28
clear sky

Social Media

ಗುರುವಾರ, 29 ಜನವರಿ 2026
Light
Dark

ಇಂದಿನಿಂದ ನಾಲ್ಕು ದಿನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ

operation sindoor celebration by narendra modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಜುಲೈ.26ರವರೆಗೆ ವಿದೇಶ ಪ್ರವಾಸದಲ್ಲಿದ್ದಾರೆ.

ಈ ಬಾರಿ ಬ್ರಿಟನ್‌ ಮತ್ತು ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದು, ಭೇಟಿಯಲ್ಲಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ ಅಂತಿಮ ಸ್ವರೂಪ ನೀಡುವುದು ಹಾಗೂ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದು ಪ್ರಮುಖ ಗುರಿಯಾಗಿದೆ.

ಬ್ರಿಟನ್‌ ಭೇಟಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, 25-26ರಂದು ಮಾಲ್ಡೀವ್ಸ್‌ಗೆ ತೆರಳಲಿದ್ದಾರೆ. ಅಲ್ಲಿ ಅವರು ಮಾಲ್ಡೀವ್ಸ್‌ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

ಮಾಲ್ಡೀವ್ಸ್‌ನ ರಾಷ್ಟ್ರಪತಿ ಮೊಹಮ್ಮದ್‌ ಮುಯಿಝಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಮೋದಿ ಅವರು ಎರಡೂ ದೇಶಗಳ ನಡುವಿನ ಸಹಕಾರವನ್ನು ಗಾಢವಾಗಿರುವ ಬಗ್ಗೆ ಕೂಲಂಕುಶವಾಗಿ ಚರ್ಚೆ ನಡೆಸಲಿದ್ದಾರೆ.

Tags:
error: Content is protected !!