ಮದ್ದೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜು.28ರಂದು ಮದ್ದೂರು ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪೂರ್ವಸಿದ್ಧತೆಯಾಗಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಭದ್ರತೆ, ಶಿಷ್ಟಾಚಾರ, ವೇದಿಕೆ ನಿರ್ಮಾಣ ಸಿದ್ದತೆ, ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಗಣ್ಯರು ಪ್ರಯಾಣಿಸುವ ರಸ್ತೆಯನ್ನು ಸಮರ್ಪಕಗೊಳಿಸುವುದು, ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿರುವ ಬಗ್ಗೆ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸೂಕ್ತ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಸಿಪಿಐ ಶಿವಕುಮಾರ್, ಸಂಚಾರಿ ಪಿಎಸ್‌ಐ ರಾಮಸ್ವಾಮಿ, ಉಪ ತಹಸಿಲ್ದಾರ್ ಸೋಮಶೇಖರ್, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.




