ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಗಂಧದಗುಡಿ ಫೌಂಡೇಶನ್ ವತಿಯಿಂದ ಇಂದು ಕಬಿನಿ ಉಳಿಸಿ ಅಭಿಯಾನ ನಡೆಸಲಾಯಿತು.
ಮೈಸೂರು ನಗರದ ಬಲ್ಲಾಳ್ ವೃತ್ತದಲ್ಲಿ ಜಮಾಯಿಸಿ ಗಂಧದಗುಡಿ ಫೌಂಡೇಶನ್ ಕಾರ್ಯಕರ್ತರು, ಅಕ್ರಮ ರೆಸಾರ್ಟ್‌ಗಳು ಹಾಗೂ ಹೋಂಸ್ಟೇಗಳಿಂದ ಕಬಿನಿ ಜಲಾಶಯಕ್ಕೆ ಅಪಾಯ ಎದುರಾಗಿದೆ.
ಇಷ್ಟೆಲ್ಲಾ ಆದರೂ ಜಿಲ್ಲಾಡಳಿತ ಮಾತ್ರ ಕಣ್ಮುಚ್ಚಿ ಕುಳಿತಿದೆ. ರಾಜಕಾರಣಿಗಳ ತಾಳಕ್ಕೆ ಕುಣಿಯುತ್ತಿರುವ ಅಧಿಕಾರಿಗಳಿಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಪ್ರಾಣಿ ಪಕ್ಷಿಗಳಿಗಾಗಿ ಕಬಿನಿ. ಭ್ರಷ್ಟಾಚಾರಿಗಳಿಂದ ಕಬಿನಿ ಉಳಿಸಿ ಎಂದು ಆಗ್ರಹಿಸಿದರು.




