ಮಂಡ್ಯ : ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ಎಸಗಿರುವ ಕುರಿತು ನಗರದಲ್ಲಿ ಲೋಕಾಯುಕ್ತಕ್ಕೆ ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಬಿ.ಕೆ.ಸತೀಶ (ಬೂಸ) ದೂರು ನೀಡಿದರು.
ಬೂದನೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿಯ ಅಧ್ಯಕ್ಷೆ ಮಾನಸ ಹಾಗೂ ಪಿಡಿಒ ವೈ.ಎಸ್.ವಿನಯ್ ಕುಮಾರ್ ಅವರು 2024-25ನೇ ಸಾಲಿನಲ್ಲಿ ಗ್ರಾಮ ಪಂಚಾಯತಿಯ ನೀರು ಸರಬರಾಜು ಸಾಮಾಗ್ರಿ ಖರೀದಿಯಲ್ಲಿ ಸರ್ಕಾರದ ಪಾರದರ್ಶಕ ನಿಯಮ ಪಾಲಿಸದೆ ಅಕ್ರಮ ಎಸಗಿರುವುದಲ್ಲದೆ ಹೆಚ್ಚಿನ ಹಣ ಪಾವತಿ ಮಾಡಿ ಸಾಮಾಗ್ರಿ ಖರೀದಿ ಮಾಡಿರುವುದು ಸ್ಪಷ್ಟವಾಗಿದೆ ಎಂದು ದೂರಿ ಸಾಕ್ಷಿ ಸಮೇತ ದೂರು ಸಲ್ಲಿಸಿದರು.





