Mysore
22
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

ಮೈಸೂರು| ಜನರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ 

ಮೈಸೂರು: ರಾಕೇಶ್‌ ಸಿದ್ದರಾಮಯ್ಯ ಅವರ 10ನೇ ವರ್ಷದ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿಂದು ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ.

ಎಚ್.ಡಿ.ಕೋಟೆ ರಸ್ತೆಯ ಟಿ.ಕಾಟೂರಿನ ತೋಟದಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಕುಟುಂಬ ಸಮೇತ ಅಲ್ಲಿಗೆ ತೆರಳಿ ಮಗನ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮನೆಯಿಂದ ತೆರಳುವ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಜನರ ಅಹವಾಲು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.

Tags:
error: Content is protected !!