Mysore
24
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ದರ್ಶನ್‌ ಅಭಿಮಾನಿಗಳಿಗೆ ಪರೋಕ್ಷ ಟಾಂಗ್‌ ಕೊಟ್ಟ ಸಂಸದ ಯದುವೀರ್‌ ಒಡೆಯರ್‌

yduveer

ಮೈಸೂರು: ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಧಮ್ಕಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೂಡ ಅಂತಹ ಟೀಕೆಗಳನ್ನು ಅನುಭವಿಸಿದ್ದೇನೆ. ಸೋಷಿಯಲ್ ಮೀಡಿಯಾದಲ್ಲಿ ಎಲ್ಲೋ ಕೂತ್ಕೊಂಡು ಕಮೆಂಟ್ ಹಾಕ್ತಾರೆ. ಅಂತವರಿಗೆ ಏನು ಮಾಡಲು ಆಗಲ್ಲ.

ನಾವು ನಮ್ಮ ಕೆಲಸ ಮಾಡಿಕೊಂಡು ಹೋಗ್ಬೇಕು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆ ಮಾಡುತ್ತಿದೆ. ಕೊನೆಗೆ ತೀರ್ಪನ್ನು ಕೊಡುವ ತನಕ ನಾವು ಯಾರು ಅದಕ್ಕೆ ಪ್ರತಿಕ್ರಿಯೆ ನೀಡಬಾರದು. ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್‌ಗಳನ್ನು ನಿರ್ಲಕ್ಷ್ಯ ಮಾಡಬೇಕಷ್ಟೆ ಎಂದು ದರ್ಶನ್‌ ಅಭಿಮಾನಿಗಳಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.

Tags:
error: Content is protected !!