Mysore
17
clear sky

Social Media

ಗುರುವಾರ, 29 ಜನವರಿ 2026
Light
Dark

ಕೊಡಗು| ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿ: 10 ಕುಟುಂಬಗಳು ಕಾಳಜಿ ಕೇಂದ್ರಕ್ಕೆ ಶಿಫ್ಟ್‌

River flowing above danger level

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುದಾಲೆ ಗ್ರಾಮದಲ್ಲಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹೊಳೆ ಅಂಚಿನಲ್ಲಿ ವಾಸ ಮಾಡುತ್ತಿರುವ ಸುಮಾರು 10 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ಕಿರುದಾಲೆ ಗ್ರಾಮದಲ್ಲಿ ನದಿ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಆತಂಕದಲ್ಲೇ ದಿನ ದೂಡುತ್ತಿದ್ದ ಸುಮಾರು 10 ಕುಟುಂಬಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.

ತೀವ್ರ ಗಾಳಿ ಮಳೆ ಹೆಚ್ಚಾಗಿರುವುದರಿಂದ ಯಾವ ಸಮಯದಲ್ಲಿ ಏನಾಗುತ್ತೋ ಎಂಬ ಆತಂಕದಲ್ಲಿ ಕಾಳಜಿ ಕೇಂದ್ರಗಳಿಗೆ ತೆರಳುತ್ತಿದ್ದಾರೆ.

Tags:
error: Content is protected !!