ಕೊಡಗು: ಜಿಲ್ಲೆಯಾದ್ಯಂತ ಗಾಳಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಗಾಳಿಯಿಂದ ಮಡಿಕೇರಿ ಚೆಟ್ಟಳ್ಳಿ ರಸ್ತೆಯ ಅಬ್ಯಾಲ ಬಳಿ ಇಂದು ಬೆಳಿಗ್ಗೆ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಮರ ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಎಂದಿನಂತೆ ಶುರುವಾಗಿದ್ದು, ಮಳೆ ಇನ್ನೂ ಎರಡು ದಿನ ಮುಂದುವರಿಯುವ ಸಾಧ್ಯತೆಯಿದೆ.





