Mysore
22
broken clouds

Social Media

ಮಂಗಳವಾರ, 27 ಜನವರಿ 2026
Light
Dark

ಧಾರಾಕಾರ ಮಳೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

amaranath

ಶ್ರೀನಗರ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪಹಲ್ಗಾಮ್‌, ಬಲ್ತಾಲ್‌ ಮಾರ್ಗಗಳ ಮೂಲಕ ಸಾಗುವ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಜಮ್ಮು-ಕಾಶ್ಮೀರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದ್ದಾರೆ.

ಇನ್ನು ಈವರೆಗೆ ಪವಿತ್ರ ಅಮರನಾಥ ಗುಹಾ ದೇವಾಲಯಕ್ಕೆ 3.93 ಲಕ್ಷಕ್ಕೂ ಅಧಿಕ ಯಾತ್ರಿಕರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಗುರುವಾರ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರೀ ಮಳೆಯಿಂದಾಗಿ ಮೂಲ ಶಿಬಿರಗಳಿಂದ ಯಾತ್ರಾರ್ಥಿಗಳ ಸಂಚಾರದ ಮೇಲೆ ತೀವ್ರ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಜುಲೈ.31ರವರೆಗೆ ಭಗವತಿ ನಗರದಿಂದ ಜಮ್ಮುವಿನಿಂದ ಬಾಲ್ಟಾಲ್‌ ಮತ್ತು ನುನ್ವಾನ್‌ನ ಮೂಲ ಶಿಬಿರಗಳ ಕಡೆಗೆ ಯಾವುದೇ ಬೆಂಗಾವಲು ಸಂಚಾರವನ್ನು ಅನುಮತಿಸುವುದಿಲ್ಲ ಎಂದು ಡಿಐಪಿಆರ್‌ ತಿಳಿಸಿದೆ.

Tags:
error: Content is protected !!