ಬೆಂಗಳೂರು: ಜಿಲ್ಲಾವಾರು ಶಾಸಕರು ಹಾಗೂ ಉಸ್ತುವಾರಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ಸಭೆ ನಡೆಸಿದ್ದಾರೆ.
7 ಜಿಲ್ಲೆಗಳ ಅಂದರೆ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಶಾಸಕರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಅನುದಾನ ಬಿಡುಗಡೆ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ.
ಇದರ ಜೊತೆಗೆ ಜಿಲ್ಲೆಯ ಸಮಸ್ಯೆಗಳು ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 7 ಜಿಲ್ಲೆಗಳ ಶಾಸಕರ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ನಿವಾಸಕ್ಕೆ ತೆರಳಿದರು. ಬಳಿಕ ಸಂಜೆ ವೇಳೆಗೆ ಬೆಳಗಾವಿ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಸಕರ ಜೊತೆ ಸಭೆ ನಡೆಸಲಿದ್ದು, ಅಲ್ಲೂ ಕೂಡ ಅನೇಕ ವಿಚಾರಗಳು ಚರ್ಚೆಯಾಗುವ ಸಾಧ್ಯತೆಯಿದೆ.





