Mysore
26
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಮೀಸಲು ಹಣ ದುರುಪಯೋಗ : ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ರಾಜೀನಾಮೆಗೆ ಒತ್ತಾಯ

ಮೈಸೂರು : ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಮೀಸಲು ಹಣವನ್ನು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪಂಚ ಗ್ಯಾರಂಟಿಗಾಗಿ ಅಕ್ರಮವಾಗಿ ಬಳಸಿಕೊಳ್ಳುತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ದಲಿತ ಮಹಾಸಭಾ ರಾಜ್ಯ ಸಂಚಾಲಕ ಎಸ್.ಸುಂದರ್ ಹಣಕೊಳ ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳು ಯಾವುದೇ ಸಮುದಾಯಕ್ಕೆ, ಜಾತಿಗೆ ಸೇರಿದವಲ್ಲ. ಕಾಂಗ್ರೆಸ್ ಸರ್ಕಾರ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಮೀಸಲು ಹಣವನ್ನು, ಆರ್ಥಿಕ ಮುಗ್ಗಟ್ಟು ಎದುರಾಗಿ ಪಂಚ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿದೆ. ಇದು ಡಾ.ಬಿ.ಆರ್. ಅಂಬೇಡ್ಕರ್ ನೀಡಿರುವ ಮೀಸಲಾತಿಯನ್ನೇ ಬುಡಮೇಲು ಮಾಡಿದೆ. ಸೆಕ್ಷನ್ 7ಡಿ ದುರುಪಯೋಗವಾಗುತ್ತಿದೆ ಎಂದು ರದ್ದು ಮಾಡಿ, ಸೆಕ್ಷನ್ 7ಸಿ ಉಳಿಸಿಕೊಂಡರೆ ಅದರ ಮುಖೇನ ಪರಿಶಿಷ್ಟರ ಮೀಸಲು ಹಣವನ್ನು, ಅದಕ್ಕಿಂತಲೂ ಹೆಚ್ಚು ದುರುಪಯೋಗವಾಗುತ್ತಿದೆ. ಸೆಕ್ಷನ್ 7ಸಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಪರಿಶಿಷ್ಟ ಜಾತಿ, ವರ್ಗದವರ ಬೆಂಬಲಿಗರಾಗಿ ಅವರುಗಳನ್ನೇ ತುಳಿಯುತ್ತಿರುವ ಸಿದ್ದರಾಮಯ್ಯ ಹಾಗೂ ಡಾ.ಎಚ್.ಸಿ. ಮಹದೇವಪ್ಪ ಅವರ ವಿರುದ್ಧ ಪರಿಶಿಷ್ಟರು ಧ್ವನಿ ಎತ್ತಬೇಕಿದೆ. ಇಬ್ಬರೂ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯನ್ವಯ ಬಂಧಿಸಲು ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಾಗುವವರೆಗೂ ರಾಜ್ಯಾದಂತ ಪ್ರತಿಭಟಿಸಲಾಗುತ್ತದೆ. ಹಣ ವರ್ಗಾವಣೆ ತಡೆ ಕೋರಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!