Mysore
22
broken clouds

Social Media

ಭಾನುವಾರ, 25 ಜನವರಿ 2026
Light
Dark

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ಸಾಕ್ಷಿ ಇದೆ: ರಾಹುಲ್‌ ಗಾಂಧಿ

rahulgandhi

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷದ ಕಾನೂನು ಸಮ್ಮೇಳನದಲ್ಲಿ ಮಾತನಾಡಿದ ಅವರು, ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಚುನಾವಣಾ ಆಯೋಗವು ಇನ್ನು ಮುಂದೆ ಭಾರತದಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಅಕ್ರಮ ನಡೆದಿರುವ ಬಗ್ಗೆ ನಾವು ಸಾಬೀತುಪಡಿಸಿದ್ದೇವೆ.

ಒಂದು ಲೋಕಸಭಾ ಕ್ಷೇತ್ರದಲ್ಲಿ ಪಕ್ಷವು ಮತದಾರರ ಪಟ್ಟಿಯನ್ನು ಪರಿಶೀಲಿಸಿದಾಗ 6.5 ಲಕ್ಷ ಮತದಾರರಲ್ಲಿ 1.5 ಲಕ್ಷ ಮತದಾರರು ನಕಲಿ ಎಂದು ಕಂಡುಬಂದಿದೆ ಎಂದು ಬಹಿರಂಗಪಡಿಸಿದ್ದಾರೆ.

ಒಂದು ಲೋಕಸಭಾ ಕ್ಷೇತ್ರದಲ್ಲಿ ನಾವು ಮತದಾರರ ಪಟ್ಟಿಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ 1.5 ಲಕ್ಷ ಮತದಾರರು ನಕಲಿ ಎಂದು ನಮಗೆ ಕಂಡುಬಂದಿದೆ ಎಂದು ಆರೋಪಿಸಿದ್ದಾರೆ.

Tags:
error: Content is protected !!