Mysore
22
clear sky

Social Media

ಭಾನುವಾರ, 15 ಮಾರ್ಚ್ 2026
Light
Dark

ರಾಹುಲ್‌ ಗಾಂಧಿ ಕಪಟ ನಾಟಕ ಆರಂಭಿಸಿದ್ದಾರೆ: ಬಿ.ವೈ.ವಿಜಯೇಂದ್ರ ಆಕ್ರೋಶ

by vijayendra

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆಗಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಕ್ರಮದ ಬಗ್ಗೆ ಪುರಾವೆ ಇದ್ದಿದ್ದರೆ ಕೋರ್ಟ್‌ಗೆ ಹೋಗಿ ಪ್ರಶ್ನೆ ಮಾಡಬಹುದಿತ್ತು. ಆದರೆ ರಾಹುಲ್‌ ಗಾಂಧಿ ಈಗ ಕಪಟ ನಾಟಕ ಆರಂಭ ಮಾಡಿದ್ದಾರೆ. ಪ್ರಧಾನಿ ಮೋದಿಯವರ ವರ್ಚಸ್ಸು ಸಹಿಸಲು ಆಗುತ್ತಿಲ್ಲ. ತುರ್ತು ಪರಿಸ್ಥಿತಿ ಸೃಷ್ಟಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಆಗಸ್ಟ್.‌5ರಂದು ರಾಹುಲ್‌ ಗಾಂಧಿ ಡ್ರಾಮಾ ಮಾಡುತ್ತಾರೆ. ರಾಹುಲ್‌ ಗಾಂಧಿ ಬರುತ್ತಾರೆ ಎಂದು ಮರ ಕಡಿದರೂ ಪಾರ್ಕ್‌ ಕಾಂಪೌಂಡ್‌ ಒಡೆದಿದ್ದಾರೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ರಾಜ್ಯದ ಜನರೆದುರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Tags:
error: Content is protected !!